• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಏಳನೇ ಬಾರಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಮಹಿಳಾ ತಂಡ


ಕ್ರೈಸ್ಟ್ ಚರ್ಚ್‌.ಏ.3-ಐಸಿಸಿ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಆಸ್ಟ್ರೇಲಿಯಾ ಅಭೂತಪೂರ್ವ ಜಯಸಾಧಿಸಿದೆ. ಈ ಮೂಲಕ ಏಳನೇ ಬಾರಿಗೆ ಮಹಿಳಾ ವಿಶ್ವಕಪ್‌ ಅನ್ನು ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 356 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಪರ ಅಲಿಸಾ ಹೀಲಿ ಶತಕ (170) ಸಿಡಿಸಿ ಸಂಭ್ರಮಿಸಿದರು.

ಈ ಬೃಹತ್‌ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ತಂಡವು 43.4 ಓವರ್​ನಲ್ಲಿ 285 ರನ್​ಗೆ ಆಲೌಟ್ ಆಯಿತು. ಇಂಗ್ಲೆಂಡ್‌ ಅನ್ನು ಮಣಿಸಿದ ಆಸ್ಟ್ರೇಲಿಯಾದ ಮಹಿಳಾ ತಂಡವು 7ನೇ ಬಾರಿಗೆ ವಿಶ್ವಕಪ್‌ ಅನ್ನು ತನ್ನದಾಗಿಸಿಕೊಳ್ಳುವ ಮೂಲಕ ದಾಖಲೆ ಬರೆದಿದೆ.

2 views0 comments