• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಕ್ಷಯರೋಗದ ಸಂಪೂರ್ಣ ನಿರ್ಮೂಲನೆಯೇ ಗುರಿ- ರಾಗಪ್ರಿಯಾ

ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸೂಚನೆ

ಯಾದಗಿರಿ: ಮಾರ್ಚ್, 30-


ಯಾದಗಿರಿ- ಕ್ಷಯರೋಗದ ಸಂಪೂರ್ಣ ನಿರ್ಮೂಲನೆಯೇ ಜಿಲ್ಲಾಡಳಿತದ ಗುರಿಯಾಗಿದೆ. ಜಿಲ್ಲೆಯಲ್ಲಿ ರೋಗ ಹರಡದಂತೆ ಜಾಗೃತಿ ವಹಿಸಲು ಮನೆ- ಮನೆಗೆ ತೆರಳಿ  ಜನರಿಗೆ ಅರಿವು ಮೂಡಿಸುವಂತೆ  ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು.


ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ರೋಗದ ಲಕ್ಷಣಗಳು ಕಂಡು ಬಂದರೆ  ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು’ 

‘ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಎರಡು ಬಾರಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.


ಜಿಲ್ಲೆಯಲ್ಲಿ ಕಳೆದ ವರ್ಷಗಳಲ್ಲಿ ತಪಾಸಣೆ ಜಾಸ್ತಿ ಮಾಡಲಾಗುತ್ತಿದೆ. 2017 ರಲ್ಲಿ ಸುಮಾರು 10 ಸಾವಿರ ಜನರಿಗೆ ತಪಾಸಣೆ ಮಾಡಿದಾಗ 900 ಜನರಿಗೆ ಪಾಸಿಟಿವ್ ಬಂದಿತ್ತು.  2021 ರಲ್ಲಿ ಸುಮಾರು 14 ಸಾವಿರ ಜನರಿಗೆ ತಪಾಸಣೆ ಮಾಡಿದರೆ 900 ಜನರಿಗೆ ಪಾಸಿಟಿವ್ ಬಂದಿದೆ ಒಟ್ಟಿನಲ್ಲಿ ಪಾಸಿಟಿವ್ ರೇಟ್ ಕಡಿಮೆಯಾಗಿದೆ ಎಂದರು.


ಪೌಷ್ಟಿಕ ಆಹಾರ ಸೇವನೆಯ ಕೊರತೆಯಿಂದ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚಾಗಿದೆ. ಬಡ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯಿಂದ  ವಂಚಿತರಾಗಿದ್ದರೆ ನಮ್ಮ ಗಮನಕ್ಕೆ ತಂದರೆ ಅವರಿಗೆ ಸೌಲಭ್ಯ ಒದಗಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆ ಕುಟುಂಬಗಳು ಸರ್ಕಾರ ವಿತರಿಸುವ ಪೌಷ್ಟಿಕ ದವಸ ಧಾನ್ಯಗಳನ್ನು ಪಡೆಯಬಹುದಾಗಿದೆ  ಎಂದು  ಜಿಲ್ಲಾಧಿಕಾರಿ ತಿಳಿಸಿದರು.


1 view0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್