top of page
  • Writer's pictureಹೈದ್ರಾಬಾದ್ ಕರ್ನಾಟಕ ಡೆಸ್ಕ್

ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಕಾಸ್ ಕಿಶೋರ್

ಏಪ್ರಿಲ್ 12 ಮತ್ತು 13 ರಂದು ಎರಡು ದಿನಗಳ ಕಾಲ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿನೆ.

ಕೊಪ್ಪಳ, ಮಾ.30: ರಾಜ್ಯ ಸರ್ಕಾರಿ ನೌಕರರ ಕೊಪ್ಪಳ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಏಪ್ರಿಲ್ 12 ಮತ್ತು 13 ರಂದು ಎರಡು ದಿನಗಳ ಕಾಲ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಕ್ರೀಡಾಂಗಣ ಸಮಿತಿಯ ಪ್ರಧಾನ ವ್ಯವಸ್ಥಾಪಕರು ಹಾಗೂ ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು. 2021-22ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮಾ.30) ದಂದು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏಪ್ರಿಲ್ 12 ಮತ್ತು 13 ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಸಕಲ ನೆರವು ಒದಗಿಸಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಸಹ ಜವಾಬ್ದಾರಿಯನ್ನು ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಪವರ್‌ಲಿಫ್ಟಿಂಗ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಮತ್ತು ಈ ಬಾರಿ ಈಜು ಸ್ಪರ್ಧೆಯನ್ನು ಸಹ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಮಾತನಾಡಿ, 2021-22ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಸರ್ಕಾರಿ ನೌಕರರು ಆಗಮಿಸಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ನೌಕರರಿಗೆ ಓಓಡಿ ಸೌಲಭ್ಯ ಒದಗಿಸುವುದು, ಊಟೋಪಹಾರದ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳ ಪೂರೈಕೆ, ನಿರ್ಣಾಯಕರ ನಿಯೋಜನೆ, ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ, ಔಷಧೋಪಚಾರ ವ್ಯವಸ್ಥೆ, ಅಂಬುಲೆನ್ಸ್ ವ್ಯವಸ್ಥೆ ಕೈಗೊಳ್ಳುವುದರ ಜೊತೆಗೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

3 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್

bottom of page