• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಿ: ಸಚಿವ ನಾರಾಯಣಸ್ವಾಮಿ
ರಾಯಚೂರು ಜೂ.27,:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವತಿಯಿಂದ ಜಾರಿಗೊಳಿಸಲಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕೆಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.     ಅವರು ಸೋಮವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ್ದ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.  ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಿಂದ ಬಡವರ ಜೀವನ ಶೈಲಿಯಲ್ಲಿ ಸುಧಾರಣೆಯಾಗಬೇಕು. ಸರ್ಕಾರದ ಮಹತ್ವದ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಬಡವರು ಮತ್ತು ಅರ್ಹರಿಗೆ ಪ್ರಯೋಜನ ಸಿಗುವಂತೆ ಕಾಳಜಿವಹಿಸಬೇಕು ಎಂದು ಹೇಳಿದರು.ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಒನ್ ನೇಷನ್ ಒನ್ ರೇಷನ್, ಪ್ರಧಾನ ಮಂತ್ರಿ ಮಾತೃ ವಂದನ, ಆವಾಸ್ ಯೋಜನೆ, ಉಜ್ವಲ, ಗರೀಬ್ ಕಲ್ಯಾಣ ಅನ್ನ ಯೋಜನೆ, ಪೋಷಣ ಅಭಿಯಾನ, ಮುದ್ರಾ ಯೋಜನೆ, ಸ್ವಚ್ಛ ಭಾರತ ಮಿಷನ್, ಪ್ರಧಾನಮಂತ್ರಿ ಸ್ವನಿಧಿ ಮತ್ತಿತರ ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಅಲ್ಲದೆ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ವಿವಿಧ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.  ಈ ವೇಳೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಉಜ್ವಲ್ ಯೋಜನೆ, ಜಲಜೀವನ ಮಿಷನ್, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಇದೇ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹರಾ ಖಾನಂ, ಅಪರ ಜಿಲ್ಲಾಧಿಕಾ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಬಾಬು ಬಳಗಾನೂರು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳು ಸಭೆಯ ಇದ್ದರು.  

3 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್