top of page
  • Writer's pictureಹೈದ್ರಾಬಾದ್ ಕರ್ನಾಟಕ ಡೆಸ್ಕ್

ಶಾರ್ಟ್ ಸರ್ಕ್ಯೂಟ್: ಒಂದೇ ಕುಟುಂಬದ ‌ನಾಲ್ವರ ಸಾವು

ವಿಜಯನಗರ-ವಿದ್ಯುತ್ ಶಾರ್ಟ್ ಸರ್ಕ್ಯೂಟ್ , ಎಸಿ ಲೀಕ್ ಆಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಡಿ. ವೆಂಕಟ್ ಪ್ರಶಾಂತ್ (42), ಅವರ ಪತ್ನಿ ಡಿ. ಚಂದ್ರಕಲಾ (38), ಮಕ್ಕಳಾದ ಎಚ್.ಎ. ಅರ್ದ್ವಿಕ್ (16), ಪ್ರೇರಣಾ (8)  ಮೃತರು. ಮರಿಯಮ್ಮನಹಳ್ಳಿಯ ಐದನೇ ವಾರ್ಡಿನ ರಾಘವೇಂದ್ರ ಶೆಟ್ಟಿ ಅವರ ಮನೆಯಲ್ಲಿ ಗುರುವಾರ ತಡರಾತ್ರಿವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಬಳಿಕ ಎಸಿ ಲೀಕ್ ಆಗಿದೆ. ವಿಷಯ ಅರಿತು ಮನೆಯ ಕೆಳಭಾಗದಲ್ಲಿ ಮಲಗಿದ್ದ ರಾಘವೇಂದ್ರ ಶೆಟ್ಟಿ, ಅವರ ಪತ್ನಿ ರಾಜೇಶ್ವರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ಮನೆಯ ಮೊದಲ ಮಹಡಿಯ ಬೆಡ್ ರೂಮ್ ನಲ್ಲಿ ಮಲಗಿದ್ದ ವೆಂಕಟ್ ಪ್ರಶಾಂತ್, ಚಂದ್ರಕಲಾ, ಅರ್ದ್ವಿಕ್ ಹಾಗೂ ಪ್ರೇರಣಾ ಹೊರಗೆ ಬರಲಾಗದೆ ಉಸಿರುಗಟ್ಟಿ, ಸುಟ್ಟ ಗಾಯಗಳಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.


78 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್

bottom of page