top of page
  • ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ಸುಸೂತ್ರ ಆರಂಭ

ಪರೀಕ್ಷಾ ಕೇಂದ್ರಗಳಿಗೆ ಅಪರ ಜಿಲ್ಲಾಧಿಕಾರಿ ಮೇಲ್ವಿಚಾರಣೆಯಲ್ಲಿ ಡಾ.ಕೆ.ಆರ್.ದುರುಗೇಶ್ ಅವರು ಭೇಟಿ ನೀಡಿ, ಪರೀಕ್ಷಾ ಕಾರ್ಯ ಪರಿಶೀಲಿಸಿದರು.


ರಾಯಚೂರು ಜು.17: ಜಿಲ್ಲೆಯ ವಿವಿಧ ನೀಟ್‌ ಯುಜಿ 2022ರ ಪರೀಕ್ಷಾ ಕೇಂದ್ರಗಳಿಗೆ ಅಪರ ಜಿಲ್ಲಾಧಿಕಾರಿ ಮೇಲ್ವಿಚಾರಣೆಯಲ್ಲಿ ಡಾ.ಕೆ.ಆರ್.ದುರುಗೇಶ್ ಅವರು ಭೇಟಿ ನೀಡಿ, ಪರೀಕ್ಷಾ ಕಾರ್ಯ ಪರಿಶೀಲಿಸಿದರು.

ನಗರದ ವಿದ್ಯಾ ಭಾರತಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು. ನಂತರ ರೇಸ್ ಕಾನ್ಷ್ಪಟ್ ಸೇರಿದಂತೆ ವಿವಿಧ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿ, ಅವರು ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ರಾಯಚೂರು ನಗರದ 6 ಹಾಗೂ ಸಿಂಧನೂರು ನಗರದಲ್ಲಿ 2 ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸೇರಿದಂತೆ ಇನ್ನೀತರ ಕ್ರಮಗಳನ್ನು ಕೈಗೊಳ್ಳಿ ಮತ್ತು ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಎಲ್ಲಿಯೂ ನಕಲಿಗೆ ಅವಕಾಶ ಕಲ್ಪಿಸದೆ ಶಾಂತಿ, ಸುವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಪರೀಕ್ಷೆ ನಿಯೋಜಿತ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

--

20 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್

bottom of page