• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಅಮರನಾಥ ರಣಭೀಕರ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ


೪೩ ದಿನಗಳ ಯಾತ್ರೆಯು ಕಳೆದ ಗುರುವಾರ ಆರಂಭವಾಗಿದ್ದು ಅಗಸ್ಟ್ ೧೧ ರಂದು ಕೊನೆಗೊಳ್ಳಲಿದೆ. ಸತತ ೨ ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು ೨,೭೫೦ ಯಾತ್ರಿಕರ ಬ್ಯಾಚ್ ನಿನ್ನೆ ಯಾತ್ರೆಯನ್ನು ಪ್ರಾರಂಭಿಸಿದ್ದರು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಏಕಾಏಕಿ ಸಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏರಿಕೆ ಕಾಣುತ್ತಿದೆ. ಈವರೆಗೆ ೧೫ ಮಂದಿ ಸಾವನ್ನಪ್ಪಿದ್ದು, ೪೦ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ದೇಶಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡು ಭೀಕರ ಪ್ರವಾಹ ಸಷ್ಟಿಯಾಗಿದೆ. ಕಣಿವೆ ತಟದಲ್ಲಿ ಹರಿಯುತ್ತಿದ್ದ ನದಿ ಒಂದೇ ಸಮನೆ ಉಕ್ಕಿ ಹರಿದಿದ್ದು ಅಮರನಾಥ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಘಟನೆಯಲ್ಲಿ ೪೫ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡ ಹಲವರನ್ನು ಏರ್‌ಲಿಫ್ಟ್ ಮಾಡಿ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವಿಜಯಪುರದಲ್ಲೂ ಕಂಪಿಸಿದ ಭೂಮಿ ? ಓಡೋಡಿ ಮನೆಯಿಂದ ಹೊರ ಬಂದ ಜನತೆ ಮೇಘಸ್ಫೋಟದಿಂದ ಸುಮಾರು ಎರಡು ಸಾವಿರ ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಸೇನಾ ಸಹಾಯದಿಂದ ೧೦ ತಂಡಗಳನ್ನು ರಕ್ಷಣೆಗಾಗಿ ರಚಿಸಲಾಗಿದ್ದು ಕ್ಷಿಪ್ರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಅಮರನಾಥ ಯಾತ್ರೆಗೆ ಜೂನ್ ೩೦ ರಂದು ಚಾಲನೆ ಸಿಕ್ಕಿತ್ತು. ಮೆದಲ ತಂಡದಲ್ಲಿ ೪,೮೯೦ ಭಕ್ತರು ಯಾತ್ರೆ ಕೈಗೊಂಡಿದ್ದರು. ೪೩ ದಿನಗಳ ಯಾತ್ರೆಯು ಕಳೆದ ಗುರುವಾರ ಆರಂಭವಾಗಿದ್ದು ಅಗಸ್ಟ್ ೧೧ ರಂದು ಕೊನೆಗೊಳ್ಳಲಿದೆ. ಸತತ ೨ ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು ೨,೭೫೦ ಯಾತ್ರಿಕರ ಬ್ಯಾಚ್ ನಿನ್ನೆ ಯಾತ್ರೆಯನ್ನು ಪ್ರಾರಂಭಿಸಿದರು. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‌ಪ್ರಸಿದ್ಧವಾಗಿದೆ. ಅನಂತನಾಗ್ ಜಿಯ ಪಹಲ್ಗಾಮ್‌ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‌ನಲ್ಲಿ ಜಿಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‌ನಿಂದ ೪,೮೯೦ ಯಾತ್ರಾರ್ಥಿಗಳ ಮೆದಲ ಬ್ಯಾಚ್‌ಗೆ ಚಾಲನೆ ನೀಡಿದ್ದರು. ಕರ್ನಾಟಕದಿಂದಲೂ ಸಾಕಷ್ಟು ಭಕ್ತರು ಅಮರನಾಥ ಯಾತ್ರೆಗೆ ತೆರಳಿzರೆ. ಹಾಗಾಗಿ ಘಟನೆಯ ಬಳಿಕ ಅಮರನಾಥ ಯಾತ್ರೆಗೆ ತೆರಳಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಹೆಲ್ಪ್‌ಲೈನ್‌ನನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹೆಲ್ಪ್ ಲೈನ್ ನಂಬರ್ ? ೦೮೦-೧೦೭೦, ೨೨೩೪೦೬೭೬ಗೆ ಕರೆ ಮಾಡಬಹುದಾಗಿದೆ

5 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್