ಹೈದ್ರಾಬಾದ್ ಕರ್ನಾಟಕ ಡೆಸ್ಕ್
ಮಲ್ಲಿಕಾರ್ಜುನ ಖರ್ಗೆಗೂ ಇಡಿ ಸಮನ್ಸ್ ಜಾರಿ

ಯಂಗ್ ಇಂಡಿಯನ್ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ, ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗ ಹಾಕಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುಅನ ಖರ್ಗೆ ಅವರಿಗೂ ಇಡಿ ಸಮನ್ಸ್ ಜಾರಿ ಮಾಡಿದೆ.
ಯಂಗ್ ಇಂಡಿಯನ್ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ನ್ಯಾಶನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಂಗ್ ಇಂಡಿಯನ್ ಪ್ರಕಾಶನ ಸಂಸ್ಥೆಗೆ ಸಂಬಂಧಿಸಿದ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿತ್ತು.
ಈ ಬೆಳವಣಿಗಳ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ *ಮಲ್ಲಿಕಾರ್ಜುನ ಖರ್ಗೆ* ಅವರಿಗೂ ಇಡಿ ಸಮನ್ಸ್ ನೀಡಿದ್ದು, ತನಿಖೆ ವೇಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.