• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ನಗರದ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಪರಿಹರಿಸಲಾಗುವುದು: ಸಚಿವ

ಕಲುಷಿತ ನೀರು‌ ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ 10ಲಕ್ಷ ರೂ. ಪರಿಹಾರ ಚೆಕ್ ವಿತರಿಸಿ

ರಾಯಚೂರು: ಕಲುಷಿತ ನೀರು ಕುಡಿದು ಮೃತಪಟ್ಟ 5 ಕುಟುಂಬಗಳಿಗೆ 10 ಲಕ್ಷ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ನಗರ ಸಭೆಯಲ್ಲಿರುವ ಸಮಸ್ಯೆಗಳ ಕುರಿತು ವರದಿ ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಿದ್ದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಂಡು, ನಗರಸಭೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.

ನಗರಸಭೆಯ ಸಭಾಂಗಣದಲ್ಲಿ ಕಲುಷಿತ ನೀರು‌ ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ 10ಲಕ್ಷ ರೂ. ಪರಿಹಾರ ಚೆಕ್ ವಿತರಿಸಿ ನಂತರ ಮಾತನಾಡಿ, ರಾಯಚೂರಿನಲ್ಲಿ ಇತ್ತೀಚೆಗೆ ಕಲುಷಿತ ನೀರಿನಿಂದ ಕೆಲವರು ಸಾವನಪ್ಪಿದ್ದು, ಹಲವರು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತುದ್ದು, ಇದೊಂದು ಕಹಿ ಘಟನೆಯಾಗಿದ್ದು, ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು. ಇಂದು ಕುಟುಂಬಸ್ಥರಿಗೆ ನಗರಸಭೆಯ ಎಲ್ಲಾ ಸದಸ್ಯರು ಒಮ್ಮತದಿಂದ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ ರೂ. ಕೊಡಲು ತೀರ್ಮಾನಿಸಿರುವುದು ಹೆಮ್ಮೆಯ ವಿಚಾರವಾಗಿದ್ದು, ಕುಟುಂಬಸ್ಥರಿಗೆ ದೈರ್ಯ ತುಂಬುವ ಹಾಗೂ ಆರ್ಥಿಕ ನೆರವು ನೀಡುವ ಕೆಲಸವಾಗಬೇಕಾಗಿದ್ದು, ಜೊತೆಗೆ ಕಲುಷಿತ ನೀರು ಪೂರೈಕೆಗೆ ಕಾರಣವಾದ ಹಾಗೂ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯತನ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯಾದ ತಪ್ಪುಗಳಾಗದಂತೆ ಅತ್ಯಂತ ಜವಬ್ದಾರಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯನಿರ್ವಹಿಸಬೇಕು. ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ನಗರಸಭೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ನಗರಶಾಸಕ ಡಾ.ಶಿವರಾಜ್ ಪಾಟೀಲ್, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಸೇರಿದಂತೆ ವಾರ್ಡ್ ಸದಸ್ಯರು ಉಪಸ್ಥಿತರಿದ್ದರು

4 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್