ಹೈದ್ರಾಬಾದ್ ಕರ್ನಾಟಕ ಡೆಸ್ಕ್
ಮಳೆ ನೀರು ಕೊಯ್ಲು ಯೋಜನೆಗೆ ಸಚಿವ ನಾಗೇಶ ಚಾಲನೆ

ರಾಯಚೂರು- ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿ ಗ್ರಾಮದಲ್ಲಿ ICICI Foundation ವತಿಯಿಂದ ಆದರ್ಶ ವಿದ್ಯಾಲಯದಲ್ಲಿ ಅಳವಡಿಸಿರುವ ಮಳೆ ನೀರು ಕೊಯ್ಲು ಯೋಜನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಬಗಮ್ಮ ಮುದುಕಪ್ಪ, ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಗರೀಮ ಪವಾರ್, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಇಂದಿರಾ, ತಹಸೀಲ್ದಾರ್ ಶ್ರೀನಿವಾಸ ಚಾಪೆಲ್, ಎಸ್.ಡಿ.ಎಮ್.ಸಿ ಅಧ್ಯಕ್ಷ ಸೂಗುರೇಶ್ ಎಸ್.ಗುಡಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.